ಬೆಂಗಳೂರು :ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನ ಮನೆಯಲ್ಲೇ ಜೀವ ಕಳೆದುಕೊಂಡ ಯುವತಿ...!!

ಬೆಂಗಳೂರು :ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನ ಮನೆಯಲ್ಲೇ ಜೀವ ಕಳೆದುಕೊಂಡ ಯುವತಿ...!!

ಬೆಂಗಳೂರು: ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನ ಮನೆಯಲ್ಲೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಅರಸಿಕೆರೆ ಮೂಲದ ನಿಖಿತಾ (19) ಮೃತ ದುರ್ದೈವಿ. ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಯುವತಿ ಅರಸಿಕೆರೆಯಿಂದ ಪಿಲ್ಲಹಳ್ಳಿಯಲ್ಲಿರುವ ಪ್ರಿಯಕರನ ಮನೆಗೆ ಬಂದಿದ್ದಳು.

ಮೃತ ನಿಖಿತಾ ಹಾಗೂ ಪಿಲ್ಲಹಳ್ಳಿ ಗ್ರಾಮದ ರಾಘವೇಂದ್ರ ಎಂಬ ಯುವಕ ಕಳೆದ 5-6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಹೊಸ ವರ್ಷದ ಆಚರಣೆ ನಿಮಿತ್ತ ಜ.1ರಂದು ಅರಸೀಕೆರೆಯಿಂದ ಬೆಂಗಳೂರಿನ ರಾಘವೇಂದ್ರ ಮನೆಗೆ ಬಂದಿದ್ದಳು. ಈ ವೇಳೆ ತನ್ನನ್ನು ಮದುವೆಯಾಗುವಂತೆ ನಿಖಿತಾ ರಾಘವೇಂದ್ರನಿಗೆ ಒತ್ತಾಯಿಸಿದ್ದಾಳೆ. ಆದರೆ, ಇದಕ್ಕೆ ರಾಘವೇಂದ್ರ ಸಮಯ ಕೊಡುವಂತೆ ಹೇಳಿದ್ದಾನೆ. ಇದರಿಂದ ಬೇಸತ್ತ ನಿಖಿತಾ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಮನೆಯವರಿಗೆ ಕರೆ ಮಾಡಿ ಹೇಳಿದ್ದಾಳೆ. ಇದರಿಂದ ಕಂಗೆಟ್ಟ ಮನೆಮಂದಿ ವಾಪಸ್ ಕರೆ ಮಾಡುವ ವೇಳೆಗೆ ಆಕೆ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಯುವತಿ ಪೋಷಕರು ಆಕೆಯನ್ನು ಪ್ರೀತಿ ಮಾಡಿದ ಯುವಕನೇ ಆರೋಪಿ ರಾಘವೇಂದ್ರನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article