ಯಲ್ಲಾಪುರ :ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲಿ ವಿಚ್ಛೇದಿತ ಯುವತಿಯ ಬರ್ಬರ ಹತ್ಯೆ, ಬಜರಂಗದಳ ಪ್ರತಿಭಟನೆ ಎಚ್ಚರಿಕೆ ನಡುವಲ್ಲೇ ಆರೋಪಿ ರಫೀಕ್ ಶವ ಕಾಡಿನಲ್ಲಿ ಪತ್ತೆ... !

ಯಲ್ಲಾಪುರ :ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲಿ ವಿಚ್ಛೇದಿತ ಯುವತಿಯ ಬರ್ಬರ ಹತ್ಯೆ, ಬಜರಂಗದಳ ಪ್ರತಿಭಟನೆ ಎಚ್ಚರಿಕೆ ನಡುವಲ್ಲೇ ಆರೋಪಿ ರಫೀಕ್ ಶವ ಕಾಡಿನಲ್ಲಿ ಪತ್ತೆ... !


ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮದುವೆಗೆ ನಿರಾಕರಿಸಿದ ವಿಚ್ಛೇದಿತ ಮಹಿಳೆ ರಂಜಿತಾ ಎಂಬವರನ್ನು  ರಸ್ತೆ ಮಧ್ಯೆಯೇ ಶನಿವಾರ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರೋಪಿಯನ್ನ ರಫೀಕ್ ಎಂದು ಗುರುತಿಸಿದ್ದು ಆತ ತಲೆಮರೆಸಿಕೊಂಡಿದ್ದ. ಪೊಲೀಸರು ಶ್ವಾನದಳದ ಸಹಾಯದಿಂದ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಅರಣ್ಯದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. 

ಕಾಳಮ್ಮನಗರ ಅರಣ್ಯ ಪ್ರದೇಶದಲ್ಲಿ ರಫೀಕ್ ಮೃತದೇಹ ಪತ್ತೆಯಾಗಿದೆ. ಘಟನೆ ಶನಿವಾರ ಬೆಳಗ್ಗೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಸುಮಾರು ಹತ್ತು ವರ್ಷಗಳ ಹಿಂದೆ ಗಂಡನಿಂದ ವಿಚ್ಛೇದನ ಪಡೆದಿದ್ದ ರಂಜಿತಾ ರಫೀಕ್ ನನ್ನ ಪ್ರೀತಿಸುತ್ತಿದ್ದಳು. ಇಬ್ಬರೂ ಕ್ಲಾಸ್‌ ಮೇಟ್‌ಗಳಾಗಿದ್ದರು. ಇಬ್ಬರ ಕುಟುಂಬಗಳ ನಡುವೆ ಉತ್ತಮ ಬಾಂಧವ್ಯವಿತ್ತು. ರಫೀಕ್ ಆಗಾಗ ರಂಜಿತಾ ಮನೆಗೆ ಬಂದು ಊಟ ಮಾಡಿ ಹೋಗುತ್ತಿದ್ದ. ರಂಜಿತಾ ತನ್ನ ಮಗನೊಂದಿಗೆ, ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಿದ್ದಳು. ಜೀವನೋಪಾಯಕ್ಕಾಗಿ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. 

ಇತ್ತೀಚೆಗೆ ರಫೀಕ್, ರಂಜಿತಾಳನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಆದರೆ ರಂಜಿತಾ ಇದಕ್ಕೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ರಫೀಕ್, ಎಂದಿನಂತೆ ರಂಜಿತಾ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ರಸ್ತೆ ಮಧ್ಯೆ ಆಕೆಯನ್ನು ಅಡ್ಡಗಟ್ಟಿ ಮದುವೆಯ ಪ್ರಸ್ತಾಪ ಮಾಡಿದ್ದು, ನಿರಾಕರಿಸಿದ್ದಕ್ಕೆ ಬೇಸತ್ತು ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಘಟನೆ ನಡೆದ ಹಿಂದಿನ ದಿನದ ರಾತ್ರಿಯೂ ಆರೋಪಿ ರಫೀಕ್ ಮತ್ತು ಮೃತ ರಂಜಿತಾಳ ಅಣ್ಣ ಸ್ನೇಹಿತರಾಗಿದ್ದ ಕಾರಣ ಹಿಂದಿನ ರಾತ್ರಿ ಇಬ್ಬರೂ ಒಟ್ಟಿಗೆ ಪಾರ್ಟಿ ಮಾಡಿದ್ದರು ಎಂದು ತಿಳಿದುಬಂದಿದೆ.

ಇತ್ತ, ಹಿಂದೂ ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿರುವುದನ್ನು ಖಂಡಿಸಿ ವಿಎಚ್‌ಪಿ ಸಂಘಟನೆ ಯಲ್ಲಾಪುರದಲ್ಲಿ ಇಂದು ಬಂದ್‌ಗೆ ಕರೆ ನೀಡಿತ್ತು. ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು. ಆರೋಪಿ ಬಂಧಿಸುವ ವರೆಗೂ ರಂಜಿತಾಳ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದವು. ಆದರೆ, ಈ ಬೆಳವಣಿಗೆಗಳ ನಡುವೆಯೇ ಆರೋಪಿ ರಫೀಕ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

Ads on article

Advertise in articles 1

advertising articles 2

Advertise under the article